- Advertisement -
- Advertisement -



ನವದೆಹಲಿ: ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು ಏರಿಕೆ ಮಾಡಿದೆ.

ಡಿಸೆಂಬರ್ 1 ರಿಂದ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಬೆಲೆ ಏರಿಕೆ ಮಾಡಿದ್ದು, ಪ್ರತಿ ಸಿಲಿಂಡರ್‌ಗೆ 103.50 ರೂ.ವರೆಗೆ ಹೆಚ್ಚಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದ ಪ್ರತಿ ಸಿಲಿಂಡರ್ ಗೆ 100.50 ರೂ ಹೆಚ್ಚಳವಾಗಿದೆ. ಈ ಮೂಲಕ ಇಲ್ಲಿ ಈಗ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2101 ರೂ.ಗೆ ಏರಿಕೆಯಾಗಿದೆ.

ಈ ನಡುವೆ ಜನ ಸಾಮಾನ್ಯರು ನಿಟ್ಟುಸಿರು ಬಿಡುವಂತಾಗಿದ್ದು, ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿಲ್ಲ. ಸದ್ಯ ದೆಹಲಿಯಲ್ಲಿ ಗೃಹ ಬಳಕೆಯ 14.2 ಕೆಜಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ಬೆಲೆ 899.50 ರೂ.ನಷ್ಟಿದೆ.




- Advertisement -








