

ವಿಟ್ಲ: ವಿಶ್ವದ ಅತ್ಯಂತ ದೊಡ್ಡ ಕಾರ್ಮಿಕ ಸಂಘಟನೆ ಭಾರತೀಯ ಮಜ್ದೂರ್ ಸಂಘ (BMS) ಇದರ ತಾಲೂಕು ಸಮಿತಿಯ ನೂತನ ಕಚೇರಿ ಹಾಗೂ ಸಂಯೋಜಿತ ಸಂಘಟನೆ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ ಇದರ ಉದ್ಘಾಟನಾ ಸಮಾರಂಭ ವಿಜಯ ದಶಮಿಯ ಶುಭದಿನದಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಎದುರಿನ ಕಟ್ಟಡದಲ್ಲಿ ಉದ್ಘಾಟನೆಗೊಳಲಿದ್ದು ಬಳಿಕ ಪಂಚಲಿಂಗೇಶ್ವರ ಸದನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಎಚ್.ಜಗನ್ನಾಥ ಸಾಲ್ಯಾನ್ ಉದ್ಘಾಟನೆ ಮಾಡಲಿದ್ದು, ಬಿಎಂಎಸ್ ಮಾಜಿ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್, ಆರ್ ಎಸ್ ಎಸ್ ಜಿಲ್ಲಾ ಸಂಪರ್ಕ ಪ್ರಮುಖ್ ವಿನೋದ್ ಅಡ್ಕಸ್ಥಳ.
ಬಿಎಂಎಸ್ ಮುಖ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್, ವಿಟ್ಲದ ಉದ್ಯಮಿಗಳಾದ ಪಿ ಸುಬ್ರಾಯ ಪೈ ಭಾಗವಹಿಸಲಿದ್ದಾರೆ. ಎಲ್ಲಾ ಕಾರ್ಮಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ನೂತನ ಸಮಿತಿಯ ಅಧ್ಯಕ್ಷರಾದ ರಾಜೇಶ್ ಬೊಬ್ಬೆಕೇರಿ, ಕಾರ್ಯದರ್ಶಿ ಸಂದೇಶ್ ಕೆಲಿಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
