Wednesday, August 5, 2026
spot_imgspot_img
spot_imgspot_img

ವಿಟ್ಲ: ಕೊರಗಜ್ಜ ದೈವಕ್ಕೆ ಅವಮಾನ..! ಜ. 11 ರಂದು ಎಲ್ಲಾ ದೈವ, ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

- Advertisement -
- Advertisement -
vtv vitla
vtv vitla

ಸ್ವಾಮಿ ಕೊರಗಜ್ಜನ ನಿಂದನೆ, ಅಪಹಾಸ್ಯ, ನಿರಂತರ ಹಿಂದೂ ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸುವುದು, ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೈವ ದೇವರನ್ನು ಅಶ್ಲೀಲವಾಗಿ ಚಿತ್ರಿಸಿ ಅವಮಾನಗೊಳಿಸುವುದರ ವಿರುದ್ಧ 11 ಜನವರಿ ಮಂಗಳವಾರ ಎಲ್ಲಾ ದೇವಸ್ಥಾನ, ದೈವಸ್ಥಾನ, ಭಜನಾ ಮಂದಿರಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಹಲವು ದೇವಾಲಯಗಳಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಲಿದ್ದು, ಪ್ರತಿ ದೇವಾಲಯದಲ್ಲಿ ಪ್ರಾರ್ಥನೆ ಮಾಡುವಂತೆ ವಿಶ್ವ ಹಿಂದೂ ಪರಿಷತ್ ನ ಮುಖಂಡ ಶರಣ್ ಪಂಪ್’ವೆಲ್ ತಿಳಿಸಿದ್ದಾರೆ.

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಸೇರಿದಂತೆ ಕರಾವಳಿಯ ವಿವಿಧ ದೇವಾಲಯಗಳಲ್ಲಿ ಪ್ರಾರ್ಥನೆ ನಡೆಯಲಿದೆ.

ಕೊರಗಜ್ಜನನ್ನು ಅಪಹಾಸ್ಯ ಮಾಡಿದವರಿಗೆ ಪೊಲೀಸರು ಕಾನೂನು ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷತ್’ನ ವಿಟ್ಲ ಪ್ರಖಂಡದ ಅಧ್ಯಕ್ಷ ಪದ್ಮನಾಭ ವಿಟ್ಲ ಆಗ್ರಹಿಸಿದ್ದಾರೆ.

suvarna gold
- Advertisement -

Related news

error: Content is protected !!