ವಿಟ್ಲ: ಅಳಕಮಜಲು ಸಮೀಪದ ನಿನ್ನಿಕಲ್ಲು ಗುಡ್ಡದಲ್ಲಿ ಮುಸ್ಲಿಂ ಯುವಕರೊಂದಿಗೆ ಹಿಂದೂ ಅಪ್ರಾಪ್ತ ಹುಡುಗಿ ಪತ್ತೆ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಎರಡು ಮುಸ್ಲಿಂ ಯುವಕರು, ಒಬ್ಬಳು ಮುಸ್ಲಿಂ ಯುವತಿ ಹಾಗೂ ಹಿಂದೂ ಅಪ್ರಾಪ್ತ ಹುಡುಗಿ ನಿನ್ನಿ ಕಲ್ಲು ಎಂಬಲ್ಲಿ ಸ್ಥಳೀಯರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪ್ರಕರಣ ಪೊಲೀಸ್ ಠಾಣಾ ಮೆಟ್ಟಿಲೇರಿದೆ.
ಹಿಂದೂ ಹೆಣ್ಣುಮಗಳ ಪೋಷಕರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನಲ್ಲಿ ಏನಿದೆ..?
ಕಬಕ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ಸರಕಾರದ ವತಿಯಿಂದ ನಡೆಸುವ ಕಂಪ್ಯೂಟರ್ ಶಿಕ್ಷಣ ಪಡೆಯಲು ತೆರಳಿದ್ದು ಹಿಂದೂ ಹುಡುಗಿಯನ್ನು ಅಲ್ಲಿಂದ ಇಬ್ಬರು ಯುವಕರಾದ ಮಹಮ್ಮದ್ ಶಾಕೀರ್ ಮತ್ತು ಅಪ್ರಾಪ್ತ ಬಾಲಕನೋರ್ವ ಪುಸಲಾಯಿಸಿ ಅಪಹರಣ ಮಾಡಿದ್ದಾರೆ. ಇಡ್ಕಿದು ಗ್ರಾಮದ ನಿನ್ನಿಕಲ್ಲು ಎಂಬಲ್ಲಿಗೆ ಯಾವುದೋ ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ವಿಚಾರವನ್ನು ಮಗಳು ಸಂಜೆ 5.30 ಗಂಟೆಗೆ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾಳೆ. ಪೋಷಕರು ನಿನ್ನಿಕಲ್ಲು ಎಂಬಲ್ಲಿನ ಎತ್ತರದ ಗುಡ್ಡ ಪ್ರದೇಶದ ಕಡೆಗೆ ಹೋಗಿ ನೋಡಿದಾಗ ಅಲ್ಲಿ ಇಬ್ಬರು ಹುಡುಗರು ಇರುವುದನ್ನು ಕಂಡು ತನ್ನ ಮಗಳನ್ನು ಹೆಸರು ಕೂಗಿ ಕರೆದಾಗ ಅವರಿಬ್ಬರು ಅಲ್ಲಿಂದ ಓಡಿ ಹೋಗಿರುತ್ತಾರೆ. ನಂತರ ಮಗಳನ್ನು ಮನೆಗೆ ಕರೆದುಕೊಂಡು ಹೋಗಿ ಈ ಬಗ್ಗೆ ಸಮಾಲೋಚನೆ ನಡೆಸಿ ದೂರು ನೀಡಿದ್ದಾಗಿ ಉಲ್ಲೇಖವಾಗಿದೆ.

- ನೇರಳಕಟ್ಟೆ: ಶ್ರೀ ಗಣೇಶ ಸಭಾಭವನದಲ್ಲಿ ಭಾರತ್ ಮಾತಾ ಪೂಜನಾ ಹಾಗೂ ಯೋಗ ಸಮವಸ್ತ್ರ ವಿತರಣೆ
- ಕನ್ಯಾನ ಸರ್ಕಾರಿ ಪದವಿ ಕಾಲೇಜಿನಲ್ಲಿ ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಶ್ರಮದಾನ
- ವಿಟ್ಲ: ವಿನೂತನ ಯುವಕ ಮಂಡಲ (ರಿ)- ಬೆಳ್ಳಿ ಹಬ್ಬದ ಸಂಭ್ರಮಾಚರಣೆಯ ಅಂಗವಾಗಿ ವಿನೂತನ ಕೃಷಿ ವಿಕಾಸ
- ಶ್ರೀ ಗಣೇಶೋತ್ಸವ ಸಮಿತಿ ಕೆಲಿಂಜ ವತಿಯಿಂದ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಬಂಗಾರ್ದ ಪರ್ಬ- ಅಂಗವಾಗಿ ಶ್ರೀ ಮಹಾಗಣಪತಿ ದೇವರಿಗೆ ಬೆಳ್ಳಿಯ ಕಿರೀಟ ಸಮರ್ಪಣೆ-ಭವ್ಯ ವಾಹನ ಜಾಥಾ
- ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಸಭೆ: ರೈತ ಮೋರ್ಚಾ ನೂತನ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ ತರ್ಯಾಡ್ಕ ಆಯ್ಕೆ











