Sunday, August 9, 2026
spot_imgspot_img
spot_imgspot_img

ವಿಟ್ಲ: ಜೀಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

- Advertisement -
- Advertisement -

ವಿಟ್ಲ: ಆಜಾದಿ ಕಾ ಅಮೃತ್ ಮಹೋತ್ಸವ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ ಜೀಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆಯಿತು.

ನಿವೃತ್ತ ಯೋಧರು ವಿದ್ಯಾರ್ಥಿಗಳ ಪೋಷಕರು ಆದ ಶ್ರೀ ಕರುಣಾಕರ, ಶ್ರೀ ದಯಾನಂದ, ಶ್ರೀ ರಮೇಶ, ಶ್ರೀ ಪುರಂದರ ಹಾಗೂ ಶ್ರೀ ನಾಗರಾಜ ಇವರನ್ನು ಸನ್ಮಾನಿಸಲಾಯಿತು.
ಬೆಳಿಗ್ಗೆ 9:30ಕ್ಕೆ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಶ್ರೀಧರ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.

ಜೊತೆ ಕಾರ್ಯದರ್ಶಿಯಾದ ಶ್ರೀ ಪ್ರಕಾಶ್ ಕುಕ್ಕಿಲ ರವರು ಪ್ರಪಂಚದಲ್ಲಿ ಶ್ರೇಷ್ಠ ಸ್ಥಾನ ಪಡೆದುಕೊಂಡ ದೇಶದ ಶ್ರೇಷ್ಠತೆಯನ್ನು ಕೊಂಡಾಡಿದರು ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಶ್ರೀ ಹಸನ್ ವಿಟ್ಲ ಮೋಹನ್ ಎ, ಮೋನಪ್ಪ ಶೆಟ್ಟಿ, ಆಡಳಿತ ಅಧಿಕಾರಿ ಶ್ರೀ ರಾಧಾಕೃಷ್ಣ ಎ,ಪ್ರಾಂಶುಪಾಲರಾದ ಶ್ರೀ ಜಯರಾಮ್ ರೈ ಹಾಗೂ ಉಪಪ್ರಾಂಶುಪಾಲೆಯರಾದ ಶ್ರೀಮತಿ ಜ್ಯೋತಿ ಶೆಣೈ ಹಾಗೂ ಶ್ರೀಮತಿ ಹೇಮಲತಾ ಉಪಸ್ಥಿತರಿದ್ದರು.

ಶ್ರೀ ಕರುಣಾಕರ ರವರು ತಮ್ಮ ಕರ್ತವ್ಯದ ಅನುಭವವನ್ನು ಹಂಚಿಕೊಂಡರು. ಶಾಲಾ ನಾಯಕನಾದ ಶ್ರೀ ತೇಜಸ್ವಿ ತೆಂಕಬೈಲು ಈ ದಿನದ ಪ್ರಾಮುಖ್ಯತೆಯ ಕುರಿತು ಮಾತನಾಡಿದರು.

ಎಲ್ ಕೆ ಜಿ ಇಂದ ಹಿಡಿದು 10ನೇ ತರಗತಿಯ ವರೆಗಿನ ಎಲ್ಲಾ ವಿದ್ಯಾರ್ಥಿಗಳು ದೇಶಭಕ್ತಿ ಮೂಡಿಸುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಕೊನೆಗೆ ಸಿಹಿ ತಿಂಡಿ ವಿತರಿಸಲಾಯಿತು

- Advertisement -

Related news

error: Content is protected !!