Saturday, August 8, 2026
spot_imgspot_img
spot_imgspot_img

ವಿಟ್ಲ: ಜು.15 ರಂದು ಶ್ರೀ ಧಾಮ ಮಾಣಿಲದಲ್ಲಿ ನಡೆಯಲಿರುವ 1542ನೇ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆ

- Advertisement -
- Advertisement -

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ವಿಟ್ಲ ಇದರ ಆಶ್ರಯದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ, ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ, ಹಾಗೂ ಇತರ ಸಂಸ್ಥೆಗಳ ಸಹಯೋಗದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಬೆಳ್ತಂಗಡಿ ವಿಸ್ತರಣ ಕಾರ್ಯಕ್ರಮದ ಅಂಗವಾಗಿ 1542 ನೇ ಮದ್ಯವರ್ಜನ ಶಿಬಿರವು ಜುಲೈ 15 ನೇ ತಾರೀಖಿನಿಂದ ಶ್ರೀ ದಾಮ ಮಾಣಿಲ ಇಲ್ಲಿ ನಡೆಯಲಿರುವುದು.

ಇದರ ಪೂರ್ವ ತಯಾರಿ ಸಭೆಯು ಶ್ರೀ ಕ್ಷೇತ್ರ ಮಾಣಿಲ ದಲ್ಲಿ ನಡೆಯಿತು. ಶ್ರೀ ಮೋಹನ್ ದಾಸ ಸ್ವಾಮೀಜಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಿಬಿರವು ಯಶಸ್ವಿಯಾಗಿ ನಡೆಯಲು ಶ್ರೀರಾಮ ಸೇವಾ ಟ್ರಸ್ಟಿನ ಮೂಲಕ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಸಭೆಯಲ್ಲಿ ಶಿಬಿರದ ವ್ಯವಸ್ಥಾಪನಾ ಸಮಿತಿ ರಚಿಸಲಾಗಿದ್ದು ಅಧ್ಯಕ್ಷರಾಗಿ ರಾಧಾಕೃಷ್ಣ ಶೆಟ್ಟಿ ಚೆಲ್ಲಾಡ್ಕ ಹಾಗೂ ವಿವಿಧ ಪದಾಧಿಕಾರಿಗಳನ್ನು ನೇಮಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ರೊನಾಲ್ಡ್ ಡಿಸೋಜ, ಮಾಜಿ ಅಧ್ಯಕ್ಷರಾದ ಕೆಯ್ಯೂರು ನಾರಾಯಣ ಭಟ್, ಜನಜಾಗೃತಿ ವೇದಿಕೆಯ ಕೆಪು ವಲಯಅಧ್ಯಕ್ಷ ರಘುನಾಥ ಶೆಟ್ಟಿ, ಪೆರ್ನೆ ವಲಯ ಧ್ಯಕ್ಷ ರೋಹಿತಾಕ್ಷ, ಮಾಣಿ ವಲಯ ಅಧ್ಯಕ್ಷ ರಾಜಾರಾಮ್ ಕೋಲ್ಪೆ ,ಕಲ್ಲಡ್ಕ ವಲಯದ ಬಟ್ಟಪ್ಪ ಮಾಸ್ಟರ್, ಅಳಿಕೆ ವಲಯ ಅಧ್ಯಕ್ಷ ಬಾಲಕೃಷ್ಣ ಕಾರಂತ್, ಮಾಣಿಲ ಒಕ್ಕೂಟದ ಆನಂದ, ಶಿಬಿರ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ,ಯೋಜನಾ ನಿರ್ದೇಶಕರಾದ ಪ್ರವೀಣ್ ಕುಮಾರ್, ಯೋಜನಾಧಿಕಾರಿ ಚನ್ನಪ್ಪಗೌಡ ಮೊದಲಾದವರು ಉಪಸ್ಥಿತರಿದ್ದರು . ಕಾರ್ಯಕ್ರಮದಲ್ಲಿ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ಎಲ್ಲಾ ವಲಯಗಳ ಮೇಲ್ವಿಚಾರಕರು, ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಒಕ್ಕೂಟದ ಅಧ್ಯಕ್ಷರುಗಳು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದು ಸೂಕ್ತ ಸಲಹೆ ಸಹಕಾರವನ್ನು ನೀಡಿದರು.

ಮೇಲ್ವಿಚಾರಕಿ ಶ್ರೀಮತಿ ಜಯಶ್ರೀ ಪ್ರಾರ್ಥಿಸಿ ಮೇಲ್ವಿಚಾರಕ ವಿಜಯಕುಮಾರ್ ಸ್ವಾಗತಿಸಿ ,ಯೋಜನಾಧಿಕಾರಿ ಚೆನ್ನಪ್ಪ ಗೌಡ ವಂದಿಸಿದರು. ಮೇಲ್ವಿಚಾರಕಿ ಶ್ರೀಮತಿ ವಿನೋದ ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!