Sunday, July 26, 2026
spot_imgspot_img
spot_imgspot_img

ವಿಟ್ಲ: ಜೂನ್ 29ರಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡದ ಉದ್ಘಾಟನೆ

- Advertisement -
- Advertisement -

ವಿಟ್ಲ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ವಿಟ್ಲ, ಬಂಟ್ವಾಳ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ದಿನಾಂಕ : 29-06-2022ರಂದು ನಡೆಯಲಿದೆ.

ಇದರ ಉದ್ಘಾಟನೆಯನ್ನು ಉನ್ನತ ಶಿಕ್ಷಣ, ಐ.ಟಿ.ಬಿ.ಟಿ, ವಿಜ್ಞಾನ ಮತ್ತು ತಂತ್ರಜ್ಞಾನ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖಾ ಸಚಿವ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಸಿ.ಎನ್. ಅಶ್ವತ್ಥನಾರಾಯಣ ಅವರು ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ವಹಿಸಲಿದ್ದಾರೆ. ಗೌರವ ಉಪಸ್ಥಿತರಾಗಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಅಂಗಾರ ಎಸ್, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಇರಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ರಾಜೇಶ್ ನಾಯ್ಕ್, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರ್ ಮಂಜುನಾಥ್, ಎಸ್. ಎಲ್. ಭೋಜೇಗೌಡ, ಪ್ರತಾಪಸಿಂಹ ನಾಯಕ್ ಕೆ., ಮಂಜುನಾಥ ಭಂಡಾರಿ, ಹರಿಕೃಷ್ಣ ಬಂಟ್ವಾಳ ಆಗಮಿಸಲಿದ್ದಾರೆ.

- Advertisement -

Related news

error: Content is protected !!