
ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಕಾರ್ಮಿಕ ಇಲಾಖೆ ಬಂಟ್ವಾಳ ಇದರ ಸಹಯೋಗದೊಂದಿಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ಶಿಬಿರ ಕಾರ್ಯಕ್ರಮವು ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.



ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೇಷ್ಮಾ ಶಂಕರಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಆರೋಗ್ಯವಂತ ಕಾರ್ಮಿಕರು ದೇಶದ ಆಸ್ತಿ.ಆರೋಗ್ಯವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಮಾತನಾಡುತ್ತ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೈದ್ಯಾಧಿಕಾರಿಯವರಾದ ಶ್ರೀ ಪ್ರಣವ್ ಭಂಡಾರಿಯವರು ಆರೋಗ್ಯ ತಪಾಸಣೆಯ ಮೂಲ ಉದ್ದೇಶ ಹಾಗೂ ಮಾಹಿತಿ ನೀಡಿದರು. ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ರವೀಶ್ ಶೆಟ್ಟಿ ಕರ್ಕಳ ಇವರು ಈ ಕಾರ್ಯಕ್ರಮದ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಶ್ರೀ ನಾಗೇಶ್ ಕುಮಾರ್, ಶ್ರೀ ಸಂದೇಶ್ ಶೆಟ್ಟಿ, ಶ್ರೀಮತಿ ಅಮಿತ, ಶ್ರೀಮತಿ ಜಯಲಕ್ಷ್ಮಿ, ಶ್ರೀಮತಿ ರೇಖಾ, ಶ್ರೀಮತಿ ಜಯಭಾರತಿ, ಶ್ರೀ ಹರಿ ಕಿಶೋರ್ , ಶ್ರೀಮತಿ ನೆಬಿಸಾ ಕೆ ಎಚ್ , ಉಪಸ್ಥಿತರಿದ್ದರು. (ಪ್ರಭಾರ )ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಜಯ ಕೆ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಶಿಬಿರಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡರು.










