Tuesday, June 23, 2026
spot_imgspot_img
spot_imgspot_img

ಬಂಟ್ವಾಳL ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ – ಸಂಚಾರಕ್ಕೆ ಅಡೆತಡೆ

- Advertisement -
- Advertisement -

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಗುಡ್ಡ ಕುಸಿದ ಪರಿಣಾಮ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ. ಹೆದ್ದಾರಿ ಕಾಮಗಾರಿ ನಡೆಯುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅರ್ಧಂಬರ್ಧ ಕಾಮಗಾರಿ ನಡೆಸಲಾಗಿತ್ತು.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸೂರಿಕುಮೇರು ಎಂಬಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ಗುಡ್ಡ ಕುಸಿತದಿಂದಾಗಿ ಕೆಲ ಸಮಯ ಟ್ರಾಫಿಕ್‌ ಜಾಂ‌ಮ್‌ ಕೂಡ ಉಂಟಾಗಿದೆ.ಬಳಿಕ ಸ್ಥಳೀಯರು ಮಣ್ಣನ್ನು ತೆರವುಗೊಳಿಸಲು ಯತ್ನಿಸುತ್ತಿದ್ದು, ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರ ಪ್ರಾರಂಭಗೊಂಡಿದೆ.

- Advertisement -

Related news

error: Content is protected !!