Tuesday, July 21, 2026
spot_imgspot_img
spot_imgspot_img

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಆಶ್ರಯದಲ್ಲಿ ಕಡಿಮೆ ತೂಕದ ಮಕ್ಕಳ ಹಾಗೂ ಗರ್ಭಿಣಿ ಬಾಣಂತಿಯ ಬೆಳವಣಿಗೆ ಬಗ್ಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

- Advertisement -
- Advertisement -

ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಎಜೆ ಹಾಸ್ಪಿಟಲ್ ಮಂಗಳೂರು, ಹಾಗೂ ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಜಂಟಿ ಆಶ್ರಯದಲ್ಲಿ ಕಡಿಮೆ ತೂಕದ ಮಕ್ಕಳಿಗೆ ಹಾಗೂ ಗರ್ಭಿಣಿ ಬಾಣಂತಿಯ ಬೆಳವಣಿಗೆಯ ಬಗ್ಗೆ, ಉಚಿತ ಆರೋಗ್ಯ ತಪಾಸಣಾ ಶಿಬಿರವು ವಿಟ್ಲ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ಈ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಪ್ರಾಂತೀಯ ಅಧ್ಯಕ್ಷರಾದ ಶ್ರೀ ಸುದರ್ಶನ್ ಪಡಿಯಾರ್ ಇವರು ವಹಿಸಿದ್ದರು.
ಉದ್ಘಾಟನೆಯನ್ನು ಡಾ. ವೇದಾವತಿ, ಹಾಗೂ ಡಾ. ವಿಶ್ವೇಶ್ವರ ಭಟ್ ನೆರವೇರಿಸಿದರು.

ಸಭೆಯಲ್ಲಿ ಲಯನ್ಸ್ ಅಧ್ಯಕ್ಷ ಶ್ರೀ ಬಿ ಸಂದೇಶ ಶೆಟ್ಟಿ, ಕಾರ್ಯದರ್ಶಿ ಹರೀಶ್ ಶೆಟ್ಟಿ ಡಿ ಸಕ್ರಿಯ ಸದಸ್ಯರುಗಳಾದ ಜಯರಾಮ್ ಬಲ್ಲಾಳ್, ಮೋಹನ್ ಕಟ್ಟೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಉಷಾ, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಸುಮಾರು 70ಕ್ಕೂ ಅಧಿಕ ಮಕ್ಕಳು ಈ ಶಿಬಿರದ ಪ್ರಯೋಜನವನ್ನು ಪಡೆದರು. ಕ್ಲಬ್ ನ ವತಿಯಿಂದ ಪ್ರೋಟೀನ್ ಬಿ. ಪೌಷ್ಟಿಕಾಂಶವನ್ನು ಮಕ್ಕಳಿಗೆ ವಿತರಿಸಲಾಯಿತು.

- Advertisement -

Related news

error: Content is protected !!