- Advertisement -
- Advertisement -


ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಜಲಾವೃತವಾದ ಘಟನೆ ನಡೆದಿದೆ. ನೀರಿನ ಮಟ್ಟ ಏರಿಕೆಯಾಗುತ್ತಿರು ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ.

ವಿಟ್ಲ-ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಬದಿಯಲ್ಲಿ ಹರಿಯುತ್ತಿರುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ರಸ್ತೆ ಜಲಾವೃತವಾಗಿದೆ. ಇದರಿಂದಾಗಿ ಈ ದಾರಿಯಾಗಿ ವಾಹನ ಸಂಚಾರಕ್ಕೆ ತೊಡಕಾಗಿದ್ದು, ವಾಹನಗಳು ಸುತ್ತಿ ಬಳಸಿ ಪ್ರಯಾಣ ಬೆಳೆಸುವಂತಾಗಿದೆ.

ಬೆಳಗ್ಗಿನಿಂದಲೇ ನೀರಿನ ಮಟ್ಟ ಏರುತ್ತಿದ್ದು, ಅಲ್ಪ ಹೊತ್ತು ಇಳಿಮುಖವಾಗಿತ್ತು. ಇದೀಗ ಮತ್ತೆ ಏರಿಕೆ ಕಂಡಿದ್ದು ನೀರು ರಸ್ತೆಗೆ ಬಂದಿದೆ. ಇದೀಗ ರಸ್ತೆಯ ಎರಡೂ ಕಡೆಗಳಲ್ಲಿ ಸ್ಥಳೀಯ ನಾಗರೀಕರು ಕಾವಲು ಕಾಯುತ್ತಿದ್ದು ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
- 2026-27 ರ ಕಂಬಳದ ಅಧಿಕೃತ ವೇಳಾಪಟ್ಟಿ ಪ್ರಕಟ- ಪುತ್ತೂರು,ಉಪ್ಪಿನಂಗಡಿ ಕಂಬಳ ಯಾವಾಗ? ಇಲ್ಲಿದೆ ಡಿಟೇಲ್ಸ್..!
- ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: 24 ಗಂಟೆಯೊಳಗೆ ಆರೋಪಿ ಬಂಧನ
- ನಕಲಿ ಕರೆನ್ಸಿ ಮುದ್ರಣ ಪ್ರಕರಣ: ನಾಲ್ವರಿಗೆ ಪೊಲೀಸ್ ಕಸ್ಟಡಿ, ಮೂವರಿಗೆ ಆಗಸ್ಟ್ 1ರವರೆಗೆ ನ್ಯಾಯಾಂಗ ಬಂಧನ
- ಪೆಟ್ರೋಲ್ ಬಂಕ್ಗೆ ತೆರಳುತ್ತಿದ್ದ ಚಾಲಕನ ಮೇಲೆ ಹಲ್ಲೆ; ಮೂವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ
- ಐಸಿಸ್ಗೆ ಯುವಕರನ್ನು ಸೇರಿಸಲು ಹಣ ಸಂದಾಯ ಆರೋಪ – ಬೆಂಗಳೂರಲ್ಲಿ ಮುಸ್ಲಿಂ ಸಂಘಟನೆ ಮೇಲೆ ಇಡಿ ದಾಳಿ



- Advertisement -








