Tuesday, August 11, 2026
spot_imgspot_img
spot_imgspot_img

ಪುತ್ತೂರು: ಸೆಮಿನಾರ್ ಸ್ಪರ್ಧೆಯಲ್ಲಿ ವಿಟ್ಲ ಸೈಂಟ್‌ ರೀಟಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಮಾನ್ವಿ ಶೆಟ್ಟಿ ತೃತೀಯ

- Advertisement -
- Advertisement -
vtv vitla

ಪುತ್ತೂರು: ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಂತರ್ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಉದ್ಘಾಟನೆ ಕಾರ್ಯಕ್ರಮ ಕಾಲೇಜಿನ ಬೆಳ್ಳಿಹಬ್ಬದ ಸಭಾಂಗಣದಲ್ಲಿ ನಡೆಯಿತು.

ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸಲು ಮತ್ತು ಪ್ರತಿಭೆಗೆ ಸೂಕ್ತ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ 26 ಪ್ರೌಢಶಾಲಾ ಸುಮಾರು 500 ವಿದ್ಯಾರ್ಥಿಗಳಿಗೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

ಸೆಮಿನಾರ್ (ವಿಚಾರ ಸಂಕೀರ್ಣ) ಸ್ಪರ್ಧೆಯಲ್ಲಿ ವಿಟ್ಲ ಸೈಂಟ್‌ರೀಟಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಮಾನ್ವಿ ಶೆಟ್ಟಿ ತೃತೀಯ ಸ್ಥಾನ ಪಡೆದಿದ್ದಾರೆ.

- Advertisement -

Related news

error: Content is protected !!