- Advertisement -
- Advertisement -
ವಿಟ್ಲ: ವಿಟ್ಲ ಕಸಬಾ ಗ್ರಾಮದ ನೀರಕಣಿ ನಿವಾಸಿ ಶೇಖ್ ಆದಂ (76)ರವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.

ಹಲವಾರು ವರ್ಷಗಳ ಕಾಲ ಸೌದಿ ಅರೇಬಿಯಾದಲ್ಲಿ ಬ್ಯಾಂಕ್ ಉದ್ಯೋಗಿಯಾಗಿದ್ದ ಅವರು, ವಿಟ್ಲ ಜುಮಾ ಮಸೀದಿಯ ಜಮಾಅತ್ ನ ಅಧೀನದಲ್ಲಿರುವ ಹೊರೈಝೋನ್ ಪಬ್ಲಿಕ್ ಸ್ಕೂಲ್ ನ ಅಧ್ಯಕ್ಷರಾಗಿ ಮತ್ತು ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಉತ್ತಮ ಬ್ಯಾಡ್ಮಿಂಟನ್ ಕ್ರೀಡಾಪಟು ಆಗಿದ್ದ ಶೇಖ್ ಆದಂ ಅವರು ಸಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದರು. ಮೃತರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

- Advertisement -