Friday, August 28, 2026
spot_imgspot_img
spot_imgspot_img

ವಿಧಾನಸಭೆ ಉಪ ಸಭಾಪತಿ ಆನಂದ್ ಮಾಮನಿ ವಿಧಿವಶ

- Advertisement -
- Advertisement -

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ, ಸವದತ್ತಿ ಶಾಸಕ ಆನಂದ್ ಮಾಮನಿ ಶನಿವಾರ ಮಧ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

56 ವರ್ಷದ ಆನಂದ್ ಮಾಮನಿ ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕ್ಯಾನ್ಸರ್ ಕಾಯಿಲೆಯಿಂದಾಗಿ ಚೆನ್ನೈ ಖಾಸಗಿ ಆಸ್ಪತ್ರೆ ಪಡೆಯುತ್ತಿದ್ದ ಅವರನ್ನು ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮಧ್ಯರಾತ್ರಿ ಕೊನೆಯುಸಿರೆಳೆದರು.

ಅನಾರೋಗ್ಯದ ನಡುವೆಯೂ ಇತ್ತೀಚೆಗೆ ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದ ಆನಂದ್ ಮಾಮನಿ, ಗುಣಮುಖವಾಗಿ ಶೀಘ್ರ ಜನಸೇವೆಗೆ ಮರಳುವುದಾಗಿ ಹೇಳಿದ್ದರು. ನಾನು ಆರೋಗ್ಯವಾಗಿದ್ದೇನೆ, ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದಿದ್ದರು. ಆದರೆ ಇದೀಗ ಅವರು ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಭಾನುವಾರ ಮಧ್ಯಾಹ್ನ ಆನಂದ್ ಮಾಮನಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಇನ್ನು ಆನಂದ್ ಮಾಮನಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷದ ಶಾಸಕರು, ರಾಜ್ಯ ವಿಧಾ‌ನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆತ್ಮೀಯ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ‌. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ‌. ಓಂ ಶಾಂತಿ ಎಂದು ಟ್ವೀಟ್​ ಮಾಡಿ ಸಿಎಂ ಸಂತಾಪ ಸೂಚಿಸಿದ್ದಾರೆ.

- Advertisement -

Related news

error: Content is protected !!