
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಚರ್ಚೆ ನಡೆಯಬೇಕು ಎಂದು ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ. ಇಲ್ಲದೇ ಹೋದರೆ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿ ಸಂಘಟನೆ ಮುಖಂಡರು, ಸೋಮವಾರದಿಂದ ಅಧಿವೇಶನ ಆರಂಭವಾಗುತ್ತಿದೆ. ಈ ಬಾರಿ ವಿಧಾನಸಭೆ ಅಧಿವೇಶನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಚರ್ಚಿಸಬೇಕು. ಸೂಕ್ತವಾಗಿ ಚರ್ಚೆ ಆಗದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದರು.

ಅಧಿವೇಶನ ನಡೆಯುವ ವೇಳೆಯೇ ವಿದ್ಯಾರ್ಥಿಗಳು ಮುತ್ತಿಗೆ ಹಾಕ್ತೀವಿ. ಶಿಕ್ಷಣ ತಜ್ಞರ, ವಿವಿಗಳ ಅಭಿಪ್ರಾಯ ಪಡೆಯದೆಯೇ ಈ ನೀತಿ ಜಾರಿ ಮಾಡಲಾಗಿದೆ. ಪಾರ್ಲಿಮೆಂಟ್ನಲ್ಲಿ ರಾಷ್ಟ್ರೀಯ ಶಿಕ್ಷಣದ ಬಗ್ಗೆ ಚರ್ಚೆಯೇ ಆಗಿಲ್ಲ. ತರಾತುರಿಯಲ್ಲಿ ಪಾಲಿಸಿಯನ್ನ ಜಾರಿಗೆ ತಂದಿದೆ ಎಂದು ಕಿಡಿಕಾರಿದರು.
ವಿನಾಃ ಕಾರಣ ವಿದ್ಯಾರ್ಥಿಗಳ ಮೇಲೆ ಹಿಂದಿ ಹೇರಿಕೆ ಮಾಡಲಾಗುತ್ತೆ. ತಮಿಳುನಾಡು ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಧಿಕ್ಕರಿಸಿದೆ. ಹಲವು ರಾಜ್ಯಗಳು ಎನ್ಇಪಿಯನ್ನ ವಿರೋಧಿಸಿದೆ. ಆದರೆ, ಅಶ್ವಥ್ ನಾರಾಯಣ ಹಠಕ್ಕೆ ಬಿದ್ದು ಈ ಪಾಲಿಸಿ ಜಾರಿಗೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.












