Tuesday, June 16, 2026
spot_imgspot_img
spot_imgspot_img

ವೀರಕಂಬ: ತಹಶೀಲ್ದಾರ್ ನೇತೃತ್ವದ ವಿವಿಧ ಇಲಾಖೆಗಳ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ

- Advertisement -
- Advertisement -

ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ವಿವಿಧ ಇಲಾಖೆಗಳ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಿತು.

ಕೆಲಿಂಜ ಶ್ರೀನಿಕೇತನ ಸಭಾಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಾಲೂಕು ಮಟ್ಟದ ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕಾ ಇಲಾಖೆ, ಪಶು ವೈದ್ಯಕೀಯ ಇಲಾಖೆ, SRLM ಸಂಜೀವಿನಿ, ಅಂಗನವಾಡಿ ಕೇಂದ್ರದಿಂದ ಒದಗಿಸಲಾಗುವ ಆಹಾರಗಳ ಪರಿಚಯ, ವಿಟ್ಲ ಸಮುದಾಯ ಆರೋಗ್ಯ ಕೆಂದ್ರದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ, ಕೋವಿಡ್ ಲಸಿಕಾ ಕಾರ್ಯಕ್ರಮ ಸೇರಿದಂತೆ ಇತರ ಇಲಾಖೆಗಳ ಸವಲತ್ತುಗಳ ವಿತರಣೆ, ಸಮಸ್ಯೆಗಳ ಕುರಿತು ಇಲಾಖಾ ಮುಖ್ಯಸ್ಥರೊಂದಿಗೆ ಸಮಾಲೋಚನೆಗೆ ಅವಕಾಶ ನೀಡಲಾಯಿತು.

ಖುದ್ದಾಗಿ ತಹಶೀಲ್ದಾರ್ ಡಾ. ಸ್ಮಿತಾ ರಾಮು ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಭರವಸೆ ನೀಡಿದರು. ಈ ವೇಳೆ ವೀರಕಂಬ ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದು ಗ್ರಾಮವಾಸ್ಥವ್ಯದ ಅನುಕೂಲ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಂಗಳಪದವು ವೀರಕಂಭ ಅಂಗನವಾಡಿ ಮತ್ತು ವೀರಕಂಭ ಏರ್ಮೇಮಜಲು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದರು.

- Advertisement -

Related news

error: Content is protected !!