Thursday, July 30, 2026
spot_imgspot_img
spot_imgspot_img

ಶಾಲೆಯ ಕೊಠಡಿಯಲ್ಲೇ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕನ ರಾಸಲೀಲೆ..! ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ವಿದ್ಯಾರ್ಥಿಗಳು..!

- Advertisement -
- Advertisement -
suvarna gold

ಮೈಸೂರು: ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಶಾಲೆಯೊಂದರಲ್ಲಿನ ಕೊಠಡಿಯಲ್ಲಿ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಜೊತೆ ರೊಮ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಮಕ್ಕಳಿಗೆ ಪಾಠ ಮಾಡಬೇಕಾದ ಮುಖ್ಯ ಶಿಕ್ಷಕನೇ ಇಂತಹ ನೀಚ ಕೃತ್ಯಕ್ಕೆ ಇಳಿದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈತನ ರಾಸಲೀಲೆಯ ವೀಡಿಯೋವನ್ನು ಶಾಲೆಯ ಇತರ ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ವಿಡಿಯೋ ಆಧರಿಸಿ ಮುಖ್ಯ ಶಿಕ್ಷಕರ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿದೆ. ದೂರು ಸ್ವೀಕರಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!