ಶಿವಮೊಗ್ಗ: ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಿದ್ದರೂ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಭದ್ರಾವತಿ ನೆಹರು ನಗರದಲ್ಲಿ ಡಿಚ್ಚಿ ಅಲಿಯಾಸ್ ಮುಬಾರಕ್ಎಂಬಾತನಿಗೂ ಸುನೀಲ್ ಗೂ ಗಲಾಟೆ ನಡೆದಿದ್ದು, ಈ ವೇಳೆ ಸುನೀಲ್ ಮೇಲೆ ಹಲ್ಲೆ ನಡೆಸಲಾಗಿದೆ. ಚಾಕುವಿನಿಂದ ಇರಿಯಲು ಯತ್ನಿಸಲಾಗಿದೆ. ಆದರೆ, ಸುನೀಲ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಇಬ್ಬರ ನಡುವಿನ ಹಳೆಯ ವೈಮನಸ್ಯಕ್ಕೆ ನಡೆದಿದ್ದು ಎಂದು ಹೇಳಲಾಗಿದ್ದರೂ, ಸೂಕ್ಷ್ಮ ಸಮಯದ ವೇಳೆ ಇಂತಹ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿವಮೊಗ್ಗಕ್ಕೆ ಆರ್ಎಪಿ ತುಕಡಿ ಆಗಮಿಸಿದ್ದು, ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದೆ. ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತರುವ ಕೆಲಸ ಆಗ್ತಿದೆ. ಶಿವಮೊಗ್ಗದ ಘಟನೆ ಹಿನ್ನೆಲೆಯಲ್ಲಿ ನಗರದಲ್ಲೂ ಸಹ ನಿನ್ನೆಯಿಂದಲೇ ಸೆಕ್ಷನ್ ಜಾರಿಗೊಳಿಸಲಾಗಿದ್ದು, ನಗರದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.