Sunday, August 9, 2026
spot_imgspot_img
spot_imgspot_img

ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಪ್ರತಿಮೆಯನ್ನು ಹಾನಿಗೈದ ದುಷ್ಕರ್ಮಿಗಳು..!

- Advertisement -
- Advertisement -
vtv vitla
vtv vitla
vtv vitla
vtv vitla

ತಮಿಳುನಾಡು: ಸಂವಿಧಾನ ಶಿಲ್ಪಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿದ್ದು, ಪ್ರತಿಮೆಯ ಕೈಯನ್ನು ಹಾನಿಗೊಳಿಸಿದ ಘಟನೆ ಇಲ್ಲಿನ ಸೇಲಂ ಜಿಲ್ಲೆಯ ಒಮಲೂರು ಪಟ್ಟಣದ ಕಮಲಾಪುರ ಕಾಲನಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

vtv vitla

ಘಟನೆಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ರೊಚ್ಚಿಗೆದ್ದ ಅಂಬೇಡ್ಕರ್ ಅಭಿಮಾನಿಗಳು ಸೇಲಂ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ವಾಹನ ಸಂಚಾರ ಸ್ತಬ್ಧವಾಗಿತ್ತು.

ಈ ವೇಳೆ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ, ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂದೆಗೆದುಕೊಳ್ಳಲಾಗಿದೆ. ಘಟನೆಯನ್ನು ಪೊಲೀಸರು ಕೂಡ ಗಂಭೀರವಾಗಿ ಪರಿಗಣಿಸಿದ್ದು, ಕಿಡಿಗೇಡಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!