- Advertisement -
- Advertisement -
ಶಿವಮೊಗ್ಗ: ನಗರದಲ್ಲಿ ಕೊಲೆಯಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಜಿಲಾನಿ ಎಂದು ಗುರುತಿಸಲಾಗಿದೆ. ಈತ ಹರ್ಷ ಹತ್ಯೆಯ ಬಳಿಕ ಕಾರು ಚಾಲನೆ ಮಾಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸರು, ಜಿಲಾನಿಯನ್ನು ಬಂಧಿಸಿದ್ದು, ವಿಚಾರಣೆ ತೀವ್ರಗೊಳಿಸಿದ್ದಾರೆ. ಬಂಧಿತ ಶಿವಮೊಗ್ಗದ ಕ್ಲಾರ್ಕ್ ಪೇಟೆ ನಿವಾಸಿಯಾಗಿದ್ದಾನೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕೊಲೆ ಕೇಸ್ ಸಂಬಂಧ ಎ1 ಆರೋಪಿ ಖಾಸಿಫ್ ನೀಡಿದ ಮಾಹಿತಿ ಮೇರೆಗೆ 6ನೇ ಆರೋಪಿ ಮುಜಾಹಿದ್ ಮುಜ್ಜುನನ್ನು ಪೊಲೀಸರು ಬಂಧಿಸಿದ್ದರು
- Advertisement -