Monday, June 22, 2026
spot_imgspot_img
spot_imgspot_img

ಹಾಸನ: ಸಾರಿಗೆ ಬಸ್ ಹಾಗೂ ಪ್ರವಾಸಕ್ಕೆ ತೆರಳುತ್ತಿದ್ದ ಮಿನಿ ಬಸ್ ಮುಖಾಮುಖಿ ಡಿಕ್ಕಿ; 12 ವಿದ್ಯಾರ್ಥಿಗಳಿಗೆ ಗಾಯ

- Advertisement -
- Advertisement -
vtv vitla

ಹಾಸನ: ಸಾರಿಗೆ ಬಸ್ ಹಾಗೂ ಪ್ರವಾಸಕ್ಕೆ ತೆರಳುತ್ತಿದ್ದ ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 12 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸೂಲದೇವರಹಳ್ಳಿ ಬಳಿ ಇಂದು ಬೆಳಗ್ಗೆ ನಡೆದಿದೆ.

ಚನ್ನರಾಯಪಟ್ಟಣದ ಕಾಲೇಜೊಂದರ ವಿದ್ಯಾರ್ಥಿಗಳು ಮಿನಿ ಬಸ್‌ನಲ್ಲಿ ಪ್ರವಾಸ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್‌ಗೆ ಎದುರಿನಲ್ಲಿ ಬರುತ್ತಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಮಿನಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ 12 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಗಾಯಾಳು ವಿದ್ಯಾರ್ಥಿಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!