- Advertisement -
- Advertisement -

ಬೆಂಗಳೂರು: ರಾಜ್ಯಾದ್ಯಂತ ವಿವಾದ ಸೃಷ್ಟಿಸಿರುವ ಹಿಜಾಬ್ ವಿವಾದ ಇದೀಗ ಕೋರ್ಟ್ ಅಂಗಳದಲ್ಲಿದೆ. ಮೊನ್ನೆ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಹೈಕೋರ್ಟ್ನ ಏಕಸದಸ್ಯ ಪೀಠ, ವಿಚಾರಣೆಯನ್ನು ನಿನ್ನೆಗೆ ಮುಂದೂಡಿತ್ತು.

ನ್ಯಾಯಾಲಯ ನಿನ್ನೆ ಮಧ್ಯಾಹ್ನದ ವೇಳೆಗೆ ವಿಚಾರಣೆ ನಡೆಸಿ, ಸದರಿ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆಗೆ ಆದೇಶಿಸಿದೆ. ಅದರ ಬೆನ್ನಲ್ಲೇ ಇಂದಿನ ವಿಚಾರಣೆಯನ್ನು ತ್ರಿಸದಸ್ಯ ಪೀಠ ನಡೆಸಲಿದ್ದು ಹೈರ್ಕೊರ್ಟ್ ತ್ರಿಸದಸ್ಯ ಪೀಠ ರಚಿಸಿದೆ. ಈ ಪೀಠದಲ್ಲಿ ಚೀಫ್ ಜಸ್ಟೀಸ್ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ನೇತೃತ್ವದ ತ್ರಿಸದಸ್ಯ ಪೀಠ ಇದಾಗಿದೆ. ಇವತ್ತೆ ಹಿಜಾಬ್ ಅರ್ಜಿ ಕುರಿತು ವಿಚಾರಣೆ ನಡೆಸಲಿದ್ದು, ಸಂಜೆ ವೇಳೆಗೆ ತೀರ್ಪು ನೀಡುವ ಸಾಧ್ಯತೆ ಇದೆ.


- Advertisement -








