Tuesday, April 30, 2024
spot_imgspot_img
spot_imgspot_img

ಹೆದ್ದಾರಿಯಲ್ಲಿ ಭೀಕರ ಅಪಘಾತ ; 9 ಮಂದಿ ಸಾವು

- Advertisement -G L Acharya panikkar
- Advertisement -

ಮುಂಬೈ: ಟ್ರಕ್ ಹಾಗೂ ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನಪ್ಪಿರುವ ಘಟನೆ ಮುಂಬೈ-ಗೋವಾ ಹೆದ್ದಾರಿಯಲ್ಲಿ ನಡೆದಿದೆ.

ಮುಂಜಾನೆ 5 ಗಂಟೆ ಸುಮಾರಿಗೆ ಹೆದ್ದಾರಿಯ ಮಂಗಾವ್ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಬಂಧಿಕರೊಬ್ಬರು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳಿದ್ದವರು ಕಾರಿನಲ್ಲಿ ಗೋವಾಕ್ಕೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ದುರ್ಘಟನೆಯಲ್ಲಿ 4 ವರ್ಷದ ಮಗು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದೆ. ಮಗುವಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಟ್ರಕ್ ಮುಂಬೈಗೆ ತೆರಳುತ್ತಿದ್ದಾಗ, ಕಾರು ರತ್ನಗಿರಿ ಜಿಲ್ಲೆಯ ಗುಹಾಗರ್‌ಗೆ ತೆರಳುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!