Friday, September 25, 2026
spot_imgspot_img
spot_imgspot_img

ಎನ್‌ಒಸಿಗೆ 1 ಲಕ್ಷ ಲಂಚ: ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಲೋಕಾಯುಕ್ತ ಬಲೆಗೆ..!

- Advertisement -
- Advertisement -

ಶಿವಮೊಗ್ಗ: ಶಾಲಾ ಕಟ್ಟಡಕ್ಕೆ ಎನ್‌ಒಸಿ ನೀಡಲು ‍1 ಲಕ್ಷ ರೂ. ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದು, ಶಿಕಾರಿಪುರ ಟೌನ್‌ನಲ್ಲಿರುವ ಶಾಲೆಯೊಂದರ ನೂತನ ಕಟ್ಟಡಕ್ಕೆ ಅಗ್ನಿಶಾಮಕ ದಳದ ಎನ್‌ಒಸಿ ನೀಡಲು ಅಶೋಕ್ ಕುಮಾರ್ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಅನೂಪ್‌ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ರೂಪಿಸಿದ್ದರು. ಸೆ.24 ರಂದು ದೂರುದಾರರಿಂದ ಅಶೋಕ್ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಧಿಕಾರಿ ಹಣದ ಸಮೇತ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

ಶಿವಮೊಗ್ಗ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ಬಿ.ಪಿ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!